Mark · chapter 12 · verse 2
Mark 12:2 in Kannada
ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
Phalada kaala dalli avanu draakshe totada phalavannu okkaliga rinda padeyuvadakkaagi avara balige obba sevaka nannu kaluhisidanu.
Mark 12:2 in English
- King James Version (KJV)
- And at the season he sent to the husbandmen a servant, that he might receive from the husbandmen of the fruit of the vineyard.
- World English Bible (WEB)
- When it was time, he sent a servant to the farmer to get from the farmer his share of the fruit of the vineyard.
- American Standard Version (ASV)
- And at the season he sent to the husbandmen a servant, that he might receive from the husbandmen of the fruits of the vineyard.
- Bible in Basic English (BBE)
- And when the time came, he sent a servant to get from the workmen some of the fruit of the garden.
- Darby Translation (DBY)
- And he sent a bondman to the husbandmen at the season, that he might receive from the husbandmen of the fruit of the vineyard.
- Webster's Bible (WBS)
- And at the season he sent to the husbandmen a servant, that he might receive from the husbandmen of the fruit of the vineyard.
- Young's Literal Translation (YLT)
- and he sent unto the husbandmen at the due time a servant, that from the husbandmen he may receive from the fruit of the vineyard,
Read in context
- 1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
- 2ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
- 3ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
- 4ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
Cross references
- John 15:1–8 ಯೋಹಾನನು 15:1–8ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Luke 20:10 ಲೂಕನು 20:10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Zechariah 1:3–6 ಜೆಕರ್ಯ 1:3–6ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
- 2 Chronicles 36:15 2 ಪೂರ್ವಕಾಲವೃತ್ತಾಂತ 36:15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Matthew 21:34 ಮತ್ತಾಯನು 21:34ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- Zechariah 7:7 ಜೆಕರ್ಯ 7:7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
- Ezra 9:11 ಎಜ್ರನು 9:11ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.