Mark · chapter 12 · verse 25
Mark 12:25 in Kannada
ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
Yaakam dare avaru sattavarolaginda edda mele maduve maadikolluvadoo illa, maduve maadikodu vadoo illa. Aadare avaru paralokadalliruva dootarante iruttaare.
Mark 12:25 in English
- King James Version (KJV)
- For when they shall rise from the dead, they neither marry, nor are given in marriage; but are as the angels which are in heaven.
- World English Bible (WEB)
- For when they will rise from the dead, they neither marry nor are given in marriage, but are like angels in heaven.
- American Standard Version (ASV)
- For when they shall rise from the dead, they neither marry, nor are given in marriage; but are as angels in heaven.
- Bible in Basic English (BBE)
- When they come back from the dead, they do not get married, but are like the angels in heaven.
- Darby Translation (DBY)
- For when they rise from among [the] dead they neither marry, nor are given in marriage, but are as angels [who are] in the heavens.
- Webster's Bible (WBS)
- For when they shall rise from the dead, they neither marry, nor are given in marriage; but are as the angels who are in heaven.
- Young's Literal Translation (YLT)
- for when they may rise out of the dead, they neither marry nor are they given in marriage, but are as messengers who are in the heavens.
Read in context
- 23ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು.
- 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
- 25ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
- 26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
- 27ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
Cross references
- Luke 20:35–36 ಲೂಕನು 20:35–36ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ. ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
- Matthew 22:30 ಮತ್ತಾಯನು 22:30ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Hebrews 12:22–23 ಇಬ್ರಿಯರಿಗೆ 12:22–23ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- 1 Corinthians 15:42–54 1 ಕೊರಿಂಥದವರಿಗೆ 15:42–54ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.