Mark · chapter 13 · verse 2
Mark 13:2 in Kannada
ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
Yesu avanige pratyuttaravaagi-- neenu ee dodda kattadagalannu nodutteeyo? Kelage kedavalpadade ondara melondu kallu illi bidalpaduvadilla andanu.
Mark 13:2 in English
- King James Version (KJV)
- And Jesus answering said unto him, Seest thou these great buildings? there shall not be left one stone upon another, that shall not be thrown down.
- World English Bible (WEB)
- Jesus said to him, “Do you see these great buildings? There will not be left here one stone on another, which will not be thrown down.”
- American Standard Version (ASV)
- And Jesus said unto him, Seest thou these great buildings? there shall not be left here one stone upon another, which shall not be thrown down.
- Bible in Basic English (BBE)
- And Jesus said to him, Do you see these great buildings? there is not one stone here resting on another which will not be overturned.
- Darby Translation (DBY)
- And Jesus answering said to him, Seest thou these great buildings? not a stone shall be left upon a stone, which shall not be thrown down.
- Webster's Bible (WBS)
- And Jesus answering said to him, Seest thou these great buildings? there shall not be left one stone upon another, that shall not be thrown down.
- Young's Literal Translation (YLT)
- and Jesus answering said to him, 'Seest thou these great buildings? there may not be left a stone upon a stone, that may not be thrown down.'
Read in context
- 1ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
- 2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
- 3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
- 4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
Cross references
- Luke 21:6 ಲೂಕನು 21:6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- 1 Kings 9:7–8 1 ಅರಸುಗಳು 9:7–8ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- 2 Chronicles 7:20–21 2 ಪೂರ್ವಕಾಲವೃತ್ತಾಂತ 7:20–21ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು. ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Acts 6:14 ಅಪೊಸ್ತಲರ ಕೃತ್ಯಗಳು 6:14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.