Mark · chapter 13 · verse 33
Mark 13:33 in Kannada
ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
Neevu echcharavaagirri, jaagarookaraagirri, praarthisiri. Yaakandare samayavu yaavaaga endu nimage tiliyadu.
Mark 13:33 in English
- King James Version (KJV)
- Take ye heed, watch and pray: for ye know not when the time is.
- World English Bible (WEB)
- Watch, keep alert, and pray; for you don’t know when the time is.
- American Standard Version (ASV)
- Take ye heed, watch and pray: for ye know not when the time is.
- Bible in Basic English (BBE)
- Take care, keep watch with prayer: for you are not certain when the time will be.
- Darby Translation (DBY)
- Take heed, watch and pray, for ye do not know when the time is:
- Webster's Bible (WBS)
- Take ye heed, watch and pray: for ye know not when the time is.
- Young's Literal Translation (YLT)
- Take heed, watch and pray, for ye have not known when the time is;
Read in context
- 31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
- 33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
- 34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
- 35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
Cross references
- Romans 13:11–12 ರೋಮಾಪುರದವರಿಗೆ 13:11–12ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- Luke 12:40 ಲೂಕನು 12:40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Luke 21:34–36 ಲೂಕನು 21:34–36ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Matthew 24:42–44 ಮತ್ತಾಯನು 24:42–44ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Revelation 3:2 ಪ್ರಕಟನೆ 3:2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
- Matthew 26:40–41 ಮತ್ತಾಯನು 26:40–41ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Mark 13:23 ಮಾರ್ಕನು 13:23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.