Mark · chapter 13 · verse 8
Mark 13:8 in Kannada
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
Yaakandare janaangakke virodhavaagi janaangavoo raajyakke virodhavaagi raajyavoo eluvavu; mattu naanaa kadegalalli bhookampagalaaguvavu. Idallade bara gaalagalu kalavalagalu untaaguvavu; ivu sankatagala praarambhavaagive.
Mark 13:8 in English
- King James Version (KJV)
- For nation shall rise against nation, and kingdom against kingdom: and there shall be earthquakes in divers places, and there shall be famines and troubles: these [are] the beginnings of sorrows.
- World English Bible (WEB)
- For nation will rise against nation, and kingdom against kingdom. There will be earthquakes in various places. There will be famines and troubles. These things are the beginning of birth pains.
- American Standard Version (ASV)
- For nation shall rise against nation, and kingdom against kingdom; there shall be earthquakes in divers places; there shall be famines: these things are the beginning of travail.
- Bible in Basic English (BBE)
- Nation will go to war with nation, and kingdom with kingdom: there will be earth-shocks in different places; there will be times when there is no food; these things are the first of the troubles.
- Darby Translation (DBY)
- For nation shall rise up against nation, and kingdom against kingdom; and there shall be earthquakes in [different] places, and there shall be famines and troubles: these things [are the] beginnings of throes.
- Webster's Bible (WBS)
- For nation will rise against nation, and kingdom against kingdom: and there will be earthquakes in [divers] places, and there will be famines, and troubles: these [are] the beginnings of sorrows.
- Young's Literal Translation (YLT)
- for nation shall rise against nation, and kingdom against kingdom, and there shall be earthquakes in divers places, and there shall be famines and troubles; beginnings of sorrows [are] these.
Read in context
- 6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 7ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
- 8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
- 9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- 10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
Cross references
- Matthew 24:8 ಮತ್ತಾಯನು 24:8ಇವೆಲ್ಲವುಗಳು ಸಂಕಟಗಳ ಆರಂಭವು.
- Psalm 48:6 ಕೀರ್ತನೆಗಳು 48:6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- Haggai 2:22 ಹಗ್ಗಾಯ 2:22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 37:3 ಯೆಶಾಯ 37:3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- Jeremiah 25:32 ಯೆರೆಮೀಯ 25:32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
- Jeremiah 49:24 ಯೆರೆಮೀಯ 49:24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
- Acts 11:28 ಅಪೊಸ್ತಲರ ಕೃತ್ಯಗಳು 11:28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- Jeremiah 13:21 ಯೆರೆಮೀಯ 13:21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- Micah 4:9–10 ಮೀಕ 4:9–10ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು. ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
- Zechariah 14:13 ಜೆಕರ್ಯ 14:13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.