Mark · chapter 14 · verse 1
Mark 14:1 in Kannada
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
Paskada mattu huliyillada rottiya habba baruvadakke innoo eradu divasa galiddaaga pradhaanayaajakaroo shaastrigaloo upaaya dinda aatanannu hege hididu kollabekendu havanisuttiddaru.
Mark 14:1 in English
- King James Version (KJV)
- After two days was [the feast of] the passover, and of unleavened bread: and the chief priests and the scribes sought how they might take him by craft, and put [him] to death.
- World English Bible (WEB)
- It was now two days before the Passover and the Feast of Unleavened Bread, and the chief priests and the scribes sought how they might seize him by deception and kill him.
- American Standard Version (ASV)
- Now after two days was [the feast of] the passover and the unleavened bread: and the chief priests and the scribes sought how they might take him with subtlety, and kill him:
- Bible in Basic English (BBE)
- It was now two days before the feast of the Passover and the unleavened bread: and the chief priests and the scribes made designs how they might take him by deceit and put him to death:
- Darby Translation (DBY)
- Now the passover and the [feast of] unleavened bread was after two days. And the chief priests and the scribes were seeking how they might seize him by subtlety and kill him.
- Webster's Bible (WBS)
- After two days was [the feast of] the passover, and of unleavened bread: and the chief priests, and the scribes, sought how they might take him by craft, and put [him] to death.
- Young's Literal Translation (YLT)
- And the passover and the unleavened food were after two days, and the chief priests and the scribes were seeking how, by guile, having taken hold of him, they might kill him;
Read in context
- 1ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
- 2ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- 3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
Cross references
- Exodus 12:6–20 ವಿಮೋಚನಕಾಂಡ 12:6–20ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Luke 22:1–2 ಲೂಕನು 22:1–2ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು. ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- Deuteronomy 16:1–8 ಧರ್ಮೋಪದೇಶಕಾಂಡ 16:1–8ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Acts 4:25–28 ಅಪೊಸ್ತಲರ ಕೃತ್ಯಗಳು 4:25–28ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Leviticus 23:5–7 ಯಾಜಕಕಾಂಡ 23:5–7ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Psalm 62:4 ಕೀರ್ತನೆಗಳು 62:4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- Psalm 64:2–6 ಕೀರ್ತನೆಗಳು 64:2–6ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Matthew 12:14 ಮತ್ತಾಯನು 12:14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
- Matthew 26:2–5 ಮತ್ತಾಯನು 26:2–5ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು. ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Numbers 28:16–25 ಅರಣ್ಯಕಾಂಡ 28:16–25ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
Original words (Greek)
- After · G3326μετά metá
- two · G1417δύο dýo
- days · G2250ἡμέρα hēméra
- was · G2258ἦν ēn
- passover · G3957πάσχα páscha
- and · G2532καί kaí
- bread · G106ἄζυμος ázymos
- and · G2532καί kaí
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- sought · G2212ζητέω zētéō
- how · G4459πῶς pōs
- take · G2902κρατέω kratéō
- him · G846αὐτός autós
- by · G1722ἐν en
- craft · G1388δόλος dólos
- put · G615ἀποκτείνω apokteínō
- death · G615ἀποκτείνω apokteínō