Mark · chapter 14 · verse 13
Mark 14:13 in Kannada
ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
Aaga aatanu tanna shishyaralli ibbarannu kaluhisi avarige--neevu pattanadolakke hogiri; alli neerina kodavannu hottukondu hoguva obba manushyanu nimmannu sandhisuvanu; avanannu himbaalisiri.
Mark 14:13 in English
- King James Version (KJV)
- And he sendeth forth two of his disciples, and saith unto them, Go ye into the city, and there shall meet you a man bearing a pitcher of water: follow him.
- World English Bible (WEB)
- He sent two of his disciples and said to them, “Go into the city, and there a man carrying a pitcher of water will meet you. Follow him,
- American Standard Version (ASV)
- And he sendeth two of his disciples, and saith unto them, Go into the city, and there shall meet you a man bearing a pitcher of water: follow him;
- Bible in Basic English (BBE)
- And he sent two of his disciples, and said to them, Go into the town, and there will come to you a man with a vessel of water: go after him;
- Darby Translation (DBY)
- And he sends two of his disciples, and says to them, Go into the city, and a man shall meet you carrying a pitcher of water; follow him.
- Webster's Bible (WBS)
- And he sendeth two of his disciples, and saith to them, Go ye into the city, and there shall meet you a man bearing a pitcher of water: follow him.
- Young's Literal Translation (YLT)
- And he sendeth forth two of his disciples, and saith to them, 'Go ye away to the city, and there shall meet you a man bearing a pitcher of water, follow him;
Read in context
- 11ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
- 12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
- 13ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
- 14ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
- 15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
Cross references
- Matthew 26:18–19 ಮತ್ತಾಯನು 26:18–19ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು. ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
- Luke 22:10–13 ಲೂಕನು 22:10–13ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ. ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ. ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು. ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Mark 11:2–3 ಮಾರ್ಕನು 11:2–3ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
- Luke 19:30–33 ಲೂಕನು 19:30–33ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Matthew 8:9 ಮತ್ತಾಯನು 8:9ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ