Mark · chapter 14 · verse 22
Mark 14:22 in Kannada
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
Avaru ootamaaduttiruvaaga yesu rottiyannu tegedukondu aasheervadisi muridu avarige kottu--takkolliri, tinniri; idu nanna deha andanu.
Mark 14:22 in English
- King James Version (KJV)
- And as they did eat, Jesus took bread, and blessed, and brake [it], and gave to them, and said, Take, eat: this is my body.
- World English Bible (WEB)
- As they were eating, Jesus took bread, and when he had blessed it, he broke it and gave to them, and said, “Take, eat. This is my body.”
- American Standard Version (ASV)
- And as they were eating, he took bread, and when he had blessed, he brake it, and gave to them, and said, Take ye: this is my body.
- Bible in Basic English (BBE)
- And while they were taking food, he took bread, and after blessing it, he gave the broken bread to them, and said, Take it: this is my body.
- Darby Translation (DBY)
- And as they were eating, Jesus, having taken bread, when he had blessed, broke [it], and gave [it] to them, and said, Take [this]: this is my body.
- Webster's Bible (WBS)
- And as they were eating, Jesus took bread, and blessed, and broke [it] , and gave to them, and said, Take, eat: this is my body.
- Young's Literal Translation (YLT)
- And as they are eating, Jesus having taken bread, having blessed, brake, and gave to them, and said, 'Take, eat; this is my body.'
Read in context
- 20ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
- 21ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
- 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 23ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
- 24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
Cross references
- Matthew 26:26–29 ಮತ್ತಾಯನು 26:26–29ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
- Mark 14:24 ಮಾರ್ಕನು 14:24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- 1 Corinthians 10:16–17 1 ಕೊರಿಂಥದವರಿಗೆ 10:16–17ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- 1 Corinthians 11:23–29 1 ಕೊರಿಂಥದವರಿಗೆ 11:23–29ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- Luke 22:18–20 ಲೂಕನು 22:18–20ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು. ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- John 6:48–58 ಯೋಹಾನನು 6:48–58ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Genesis 41:26 ಆದಿಕಾಂಡ 41:26ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
- Zechariah 5:7 ಜೆಕರ್ಯ 5:7ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು
- Mark 6:41 ಮಾರ್ಕನು 6:41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- John 6:23 ಯೋಹಾನನು 6:23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).