Mark · chapter 14 · verse 24
Mark 14:24 in Kannada
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
Aaga aatanu avarige--idu bahu janarigoskara surisalpaduva hosaodambadikeya nanna rakta.
Mark 14:24 in English
- King James Version (KJV)
- And he said unto them, This is my blood of the new testament, which is shed for many.
- World English Bible (WEB)
- He said to them, “This is my blood of the new covenant, which is poured out for many.
- American Standard Version (ASV)
- And he said unto them, This is my blood of the covenant, which is poured out for many.
- Bible in Basic English (BBE)
- And he said to them, This is my blood of the testament, which is given for men.
- Darby Translation (DBY)
- And he said to them, This is my blood, that of the [new] covenant, that shed for many.
- Webster's Bible (WBS)
- And he said to them, This is my blood of the new testament, which is shed for many.
- Young's Literal Translation (YLT)
- and he said to them, 'This is my blood of the new covenant, which for many is being poured out;
Read in context
- 22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 23ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
- 24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- 25ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
Cross references
- Zechariah 9:11 ಜೆಕರ್ಯ 9:11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- Exodus 24:8 ವಿಮೋಚನಕಾಂಡ 24:8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Hebrews 9:15–23 ಇಬ್ರಿಯರಿಗೆ 9:15–23ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Revelation 7:9–17 ಪ್ರಕಟನೆ 7:9–17ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 6:53 ಯೋಹಾನನು 6:53ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
- 1 Corinthians 11:25 1 ಕೊರಿಂಥದವರಿಗೆ 11:25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Revelation 5:8–10 ಪ್ರಕಟನೆ 5:8–10ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Mark 10:45 ಮಾರ್ಕನು 10:45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?