Mark · chapter 14 · verse 32
Mark 14:32 in Kannada
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
Aaga avaru getsemane emba sthalakke bandaaga aatanu tanna shishyarige--naanu praarthane maadu vaaga neevu illi kootukondirri andanu.
Mark 14:32 in English
- King James Version (KJV)
- And they came to a place which was named Gethsemane: and he saith to his disciples, Sit ye here, while I shall pray.
- World English Bible (WEB)
- They came to a place which was named Gethsemane. He said to his disciples, “Sit here while I pray.”
- American Standard Version (ASV)
- And they come unto a place which was named Gethsemane: and he saith unto his disciples, Sit ye here, while I pray.
- Bible in Basic English (BBE)
- And they came to a place which was named Gethsemane: and he said to his disciples, Be seated here while I say a prayer.
- Darby Translation (DBY)
- And they come to a place of which the name [is] Gethsemane, and he says to his disciples, Sit here while I shall pray.
- Webster's Bible (WBS)
- And they came to a place which was named Gethsemane: and he saith to his disciples, Sit ye here, while I shall pray.
- Young's Literal Translation (YLT)
- And they come to a spot, the name of which [is] Gethsemane, and he saith to his disciples, 'Sit ye here till I may pray;'
Read in context
- 30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 31ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
- 32ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
- 33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- 34ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
Cross references
- Mark 14:36 ಮಾರ್ಕನು 14:36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Psalm 18:5–6 ಕೀರ್ತನೆಗಳು 18:5–6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Mark 14:39 ಮಾರ್ಕನು 14:39ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- John 18:1–11 ಯೋಹಾನನು 18:1–11ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು. ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Matthew 26:36–46 ಮತ್ತಾಯನು 26:36–46ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು. ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ; ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
- Psalm 22:1–2 ಕೀರ್ತನೆಗಳು 22:1–2ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Luke 22:39–46 ಲೂಕನು 22:39–46ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು. ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Psalm 88:1–3 ಕೀರ್ತನೆಗಳು 88:1–3ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ. ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು. ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.