Mark · chapter 14 · verse 34
Mark 14:34 in Kannada
ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
Nanna praanavu saayuvashtu atyadhikavaada duhkhakke olagaagide; neevu illiye kaadukondiddu echcharavaagirri andanu.
Mark 14:34 in English
- King James Version (KJV)
- And saith unto them, My soul is exceeding sorrowful unto death: tarry ye here, and watch.
- World English Bible (WEB)
- He said to them, “My soul is exceedingly sorrowful, even to death. Stay here and watch.”
- American Standard Version (ASV)
- And he saith unto them, My soul is exceeding sorrowful even unto death: abide ye here, and watch.
- Bible in Basic English (BBE)
- And he said to them, My soul is very sad, even to death: be here a little time, and keep watch.
- Darby Translation (DBY)
- And he says to them, My soul is full of grief even unto death; abide here and watch.
- Webster's Bible (WBS)
- And saith to them, My soul is exceeding sorrowful to death: tarry ye here, and watch.
- Young's Literal Translation (YLT)
- and he saith to them, 'Exceeding sorrowful is my soul — to death; remain here, and watch.'
Read in context
- 32ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
- 33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- 34ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
- 35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
- 36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
Cross references
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Mark 13:35–37 ಮಾರ್ಕನು 13:35–37ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Mark 14:37–38 ಮಾರ್ಕನು 14:37–38ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Isaiah 53:3–4 ಯೆಶಾಯ 53:3–4ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.