Mark · chapter 14 · verse 36
Mark 14:36 in Kannada
ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
Aatanu --appaa, tandeye, ellavugalu ninage saadhyavaagive; ee paatreyannu nanninda tegedubidu; aadaroo nanna chittadantalla, ninna chittadanteye aagali endu helidanu.
Mark 14:36 in English
- King James Version (KJV)
- And he said, Abba, Father, all things [are] possible unto thee; take away this cup from me: nevertheless not what I will, but what thou wilt.
- World English Bible (WEB)
- He said, “Abba, Father, all things are possible to you. Please remove this cup from me. However, not what I desire, but what you desire.”
- American Standard Version (ASV)
- And he said, Abba, Father, all things are possible unto thee; remove this cup from me: howbeit not what I will, but what thou wilt.
- Bible in Basic English (BBE)
- And he said, Abba, Father, all things are possible to you; take away this cup from me: but even so let not my pleasure, but yours be done.
- Darby Translation (DBY)
- And he said, Abba, Father, all things are possible to thee: take away this cup from me; but not what I will, but what thou [wilt].
- Webster's Bible (WBS)
- And he said, Abba, Father, all things [are] possible to thee; take away this cup from me: nevertheless, not what I will, but what thou wilt.
- Young's Literal Translation (YLT)
- and he said, 'Abba, Father; all things are possible to Thee; make this cup pass from me; but, not what I will, but what Thou.'
Read in context
- 34ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
- 35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು.
- 36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- 37ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
- 38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
Cross references
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- Romans 8:15–16 ರೋಮಾಪುರದವರಿಗೆ 8:15–16ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Philippians 2:8 ಫಿಲಿಪ್ಪಿಯವರಿಗೆ 2:8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- John 6:38–39 ಯೋಹಾನನು 6:38–39ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
- Jeremiah 32:27 ಯೆರೆಮೀಯ 32:27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- Mark 10:27 ಮಾರ್ಕನು 10:27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.