Mark · chapter 14 · verse 38
Mark 14:38 in Kannada
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
Neevu shodhanege olagaagadante echcharavaagiddu praarthisiri; aatmavu nijavaagiyoo siddhavaagide; aadare shareeravu balaheenavaagide endu helidanu.
Mark 14:38 in English
- King James Version (KJV)
- Watch ye and pray, lest ye enter into temptation. The spirit truly [is] ready, but the flesh [is] weak.
- World English Bible (WEB)
- Watch and pray, that you may not enter into temptation. The spirit indeed is willing, but the flesh is weak.”
- American Standard Version (ASV)
- Watch and pray, that ye enter not into temptation: the spirit indeed is willing, but the flesh is weak.
- Bible in Basic English (BBE)
- Keep watch with prayer, so that you may not be put to the test; the spirit truly is ready, but the flesh is feeble.
- Darby Translation (DBY)
- Watch and pray, that ye enter not into temptation. The spirit indeed [is] willing, but the flesh weak.
- Webster's Bible (WBS)
- Watch ye and pray, lest ye enter into temptation. The spirit truly [is] ready, but the flesh [is] weak.
- Young's Literal Translation (YLT)
- Watch ye and pray, that ye may not enter into temptation; the spirit indeed is forward, but the flesh weak.'
Read in context
- 36ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- 37ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
- 38ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- 39ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
- 40ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
Cross references
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Romans 7:18–25 ರೋಮಾಪುರದವರಿಗೆ 7:18–25ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ. ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ. ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Luke 22:40 ಲೂಕನು 22:40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- Revelation 3:2–3 ಪ್ರಕಟನೆ 3:2–3ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ. ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Luke 22:46 ಲೂಕನು 22:46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Mark 14:34 ಮಾರ್ಕನು 14:34ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.