Mark · chapter 14 · verse 53
Mark 14:53 in Kannada
ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
Idaada mele avaru yesuvannu mahaa yaajakana balige tegedukondu hodaru; aatana sangada pradhaana yaajakarellaroo hiriyaroo shaastrigaloo avana balige koodi bandaru.
Mark 14:53 in English
- King James Version (KJV)
- And they led Jesus away to the high priest: and with him were assembled all the chief priests and the elders and the scribes.
- World English Bible (WEB)
- They led Jesus away to the high priest. All the chief priests, the elders, and the scribes came together with him.
- American Standard Version (ASV)
- And they led Jesus away to the high priest: and there come together with him all the chief priests and the elders and the scribes.
- Bible in Basic English (BBE)
- And they took Jesus away to the high priest; and there came together with him all the chief priests and those in authority and the scribes.
- Darby Translation (DBY)
- And they led away Jesus to the high priest. And there come together to him all the chief priests and the elders and the scribes.
- Webster's Bible (WBS)
- And they led Jesus away to the high priest: and with him were assembled all the chief priests, and the elders and the scribes.
- Young's Literal Translation (YLT)
- And they led away Jesus unto the chief priest, and come together to him do all the chief priests, and the elders, and the scribes;
Read in context
- 51ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
- 52ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
- 53ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
- 54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- 55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
Cross references
- Matthew 26:57–68 ಮತ್ತಾಯನು 26:57–68ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು. ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು. ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು. ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು. ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- John 18:12–14 ಯೋಹಾನನು 18:12–14ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ. ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
- Luke 22:54–62 ಲೂಕನು 22:54–62ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು. ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು. ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು. ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- John 18:19–24 ಯೋಹಾನನು 18:19–24ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು. ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು. ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು. ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- Mark 15:1 ಮಾರ್ಕನು 15:1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- Acts 4:5–6 ಅಪೊಸ್ತಲರ ಕೃತ್ಯಗಳು 4:5–6ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
Original words (Greek)
- And · G2532καί kaí
- led · G520ἀπάγω apágō
- Jesus · G2424Ἰησοῦς Iēsoûs
- away · G520ἀπάγω apágō
- to · G4314πρός prós
- priest · G749ἀρχιερεύς archiereús
- and · G2532καί kaí
- him · G846αὐτός autós
- assembled · G4905συνέρχομαι synérchomai
- all · G3956πᾶς pâs
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros
- and · G2532καί kaí
- scribes · G1122γραμματεύς grammateús