Mark · chapter 14 · verse 8
Mark 14:8 in Kannada
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
Eekeyu tannindaadashtu maadiddaale; nanna shareeravannu hooniduvadakke adannu abhishekisuvadakkaagi eekeyu mundaagi maadiddaale.
Mark 14:8 in English
- King James Version (KJV)
- She hath done what she could: she is come aforehand to anoint my body to the burying.
- World English Bible (WEB)
- She has done what she could. She has anointed my body beforehand for the burying.
- American Standard Version (ASV)
- She hath done what she could; she hath anointed my body beforehand for the burying.
- Bible in Basic English (BBE)
- She has done what she was able: she has put oil on my body to make it ready for its last resting-place.
- Darby Translation (DBY)
- What she could she has done. She has beforehand anointed my body for the burial.
- Webster's Bible (WBS)
- She hath done what she could: she is come beforehand to anoint my body to the burying.
- Young's Literal Translation (YLT)
- what she could she did, she anticipated to anoint my body for the embalming.
Read in context
- 6ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
- 7ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
- 8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- 9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- 10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
Cross references
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- John 12:7 ಯೋಹಾನನು 12:7ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
- 2 Corinthians 8:1–3 2 ಕೊರಿಂಥದವರಿಗೆ 8:1–3ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- 1 Chronicles 29:1–17 1 ಪೂರ್ವಕಾಲವೃತ್ತಾಂತ 29:1–17ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ. ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು. ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- 2 Chronicles 34:19–33 2 ಪೂರ್ವಕಾಲವೃತ್ತಾಂತ 34:19–33ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು. ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.) ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು. ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು. ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು. ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
- 1 Chronicles 28:2–3 1 ಪೂರ್ವಕಾಲವೃತ್ತಾಂತ 28:2–3ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- John 19:32–42 ಯೋಹಾನನು 19:32–42ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು. ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು. ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು. ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು. ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ. ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.