Mark · chapter 15 · verse 3
Mark 15:3 in Kannada
ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
Ida llade pradhaanayaajakaru aatana mele aneka doorugalannu helidaru; aadare aatanu enoo uttara kodalilla.
Mark 15:3 in English
- King James Version (KJV)
- And the chief priests accused him of many things: but he answered nothing.
- World English Bible (WEB)
- The chief priests accused him of many things.
- American Standard Version (ASV)
- And the chief priests accused him of many things.
- Bible in Basic English (BBE)
- And the chief priests said a number of things against him.
- Darby Translation (DBY)
- And the chief priests accused him urgently.
- Webster's Bible (WBS)
- And the chief priests accused him of many things: but he answered nothing.
- Young's Literal Translation (YLT)
- And the chief priests were accusing him of many things, [but he answered nothing.]
Read in context
- 1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- 2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- 3ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
- 4ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
- 5ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
Cross references
- Isaiah 53:7 ಯೆಶಾಯ 53:7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- John 19:6–7 ಯೋಹಾನನು 19:6–7ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು. ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- John 18:29–31 ಯೋಹಾನನು 18:29–31ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- Luke 23:2–5 ಲೂಕನು 23:2–5ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Matthew 27:12 ಮತ್ತಾಯನು 27:12ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
- Mark 14:60–61 ಮಾರ್ಕನು 14:60–61ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು. ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Mark 15:5 ಮಾರ್ಕನು 15:5ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.