Mark · chapter 15 · verse 9
Mark 15:9 in Kannada
ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
Aadare pilaatanu pratyuttaravaagi avarige--yehoodyara arasanannu nimagaagi naanu bidisabeko endu kelidanu.
Mark 15:9 in English
- King James Version (KJV)
- But Pilate answered them, saying, Will ye that I release unto you the King of the Jews?
- World English Bible (WEB)
- Pilate answered them, saying, “Do you want me to release to you the King of the Jews?”
- American Standard Version (ASV)
- And Pilate answered them, saying, Will ye that I release unto you the King of the Jews?
- Bible in Basic English (BBE)
- And Pilate said in answer to them, Is it your desire that I let the King of the Jews go free?
- Darby Translation (DBY)
- But Pilate answered them saying, Will ye that I release to you the King of the Jews?
- Webster's Bible (WBS)
- But Pilate answered them, saying, Will ye that I release to you the King of the Jews?
- Young's Literal Translation (YLT)
- and Pilate answered them, saying, 'Will ye [that] I shall release to you the king of the Jews?'
Read in context
- 7ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
- 8ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
- 9ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
- 10ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
- 11ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
Cross references
- John 19:4–5 ಯೋಹಾನನು 19:4–5ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು. ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- John 19:14–16 ಯೋಹಾನನು 19:14–16ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- Matthew 27:17–21 ಮತ್ತಾಯನು 27:17–21ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು. ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
- John 18:39 ಯೋಹಾನನು 18:39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Acts 3:13–15 ಅಪೊಸ್ತಲರ ಕೃತ್ಯಗಳು 3:13–15ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.