Mark · chapter 16 · verse 15
Mark 16:15 in Kannada
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
Aatanu avarige--neevu samasta lokakke hogi ellaa srushtige suvaarteyannu saariri.
Mark 16:15 in English
- King James Version (KJV)
- And he said unto them, Go ye into all the world, and preach the gospel to every creature.
- World English Bible (WEB)
- He said to them, “Go into all the world and preach the Good News to the whole creation.
- American Standard Version (ASV)
- And he said unto them, Go ye into all the world, and preach the gospel to the whole creation.
- Bible in Basic English (BBE)
- And he said to them, Go into all the world, and give the good news to everyone.
- Darby Translation (DBY)
- And he said to them, Go into all the world, and preach the glad tidings to all the creation.
- Webster's Bible (WBS)
- And he said to them, Go ye into all the world, and preach the gospel to every creature.
- Young's Literal Translation (YLT)
- and he said to them, 'Having gone to all the world, proclaim the good news to all the creation;
Read in context
- 13ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
- 14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- 15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- 16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- 17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
Cross references
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Mark 13:10 ಮಾರ್ಕನು 13:10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Luke 24:47–48 ಲೂಕನು 24:47–48ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- Psalm 96:3 ಕೀರ್ತನೆಗಳು 96:3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.