Mark · chapter 2 · verse 24
Mark 2:24 in Kannada
ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
Adakke pharisaayaru aatanige--igo, avaru sabbat dinadalli maadabaaraddannu yaake maadu ttaare endu kelidaru.
Mark 2:24 in English
- King James Version (KJV)
- And the Pharisees said unto him, Behold, why do they on the sabbath day that which is not lawful?
- World English Bible (WEB)
- The Pharisees said to him, “Behold, why do they do that which is not lawful on the Sabbath day?”
- American Standard Version (ASV)
- And the Pharisees said unto him, Behold, why do they on the sabbath day that which is not lawful?
- Bible in Basic English (BBE)
- And the Pharisees said to him, Why are they doing what it is not right to do on the Sabbath?
- Darby Translation (DBY)
- And the Pharisees said to him, Behold, why do they on the sabbath what is not lawful?
- Webster's Bible (WBS)
- And the Pharisees said to him, Behold, why do they on the sabbath that which is not lawful?
- Young's Literal Translation (YLT)
- and the Pharisees said to him, 'Lo, why do they on the sabbaths that which is not lawful?'
Read in context
- 22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- 23ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
- 24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
- 25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
- 26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
Cross references
- Exodus 20:10 ವಿಮೋಚನಕಾಂಡ 20:10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- Matthew 12:2 ಮತ್ತಾಯನು 12:2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Isaiah 56:2 ಯೆಶಾಯ 56:2ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
- Exodus 35:2–3 ವಿಮೋಚನಕಾಂಡ 35:2–3ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- Matthew 15:2–3 ಮತ್ತಾಯನು 15:2–3ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- Matthew 7:3–5 ಮತ್ತಾಯನು 7:3–5ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- Nehemiah 13:15–22 ನೆಹೆಮೀಯ 13:15–22ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು. ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು? ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ; ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Mark 2:7 ಮಾರ್ಕನು 2:7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
- Matthew 23:23–24 ಮತ್ತಾಯನು 23:23–24ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Mark 2:16 ಮಾರ್ಕನು 2:16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- Exodus 31:15 ವಿಮೋಚನಕಾಂಡ 31:15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.