Mark · chapter 3 · verse 13
Mark 3:13 in Kannada
ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
Taruvaaya aatanu bettada mele hogi tanage bekaadavarannu kareyalu avaru aatana balige bandaru.
Mark 3:13 in English
- King James Version (KJV)
- And he goeth up into a mountain, and calleth [unto him] whom he would: and they came unto him.
- World English Bible (WEB)
- He went up into the mountain and called to himself those whom he wanted, and they went to him.
- American Standard Version (ASV)
- And he goeth up into the mountain, and calleth unto him whom he himself would; and they went unto him.
- Bible in Basic English (BBE)
- And he went up into the mountain, and sent for those whom it was his pleasure to have with him: and they went to him.
- Darby Translation (DBY)
- And he goes up into the mountain, and calls whom he himself would, and they went to him.
- Webster's Bible (WBS)
- And he goeth up upon a mountain, and calleth [to him] whom he would: and they came to him.
- Young's Literal Translation (YLT)
- And he goeth up to the mountain, and doth call near whom he willed, and they went away to him;
Read in context
- 11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- 12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- 13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
- 14ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
- 15ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
Cross references
- Luke 6:12–16 ಲೂಕನು 6:12–16ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು. ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ, ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- Luke 9:1 ಲೂಕನು 9:1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- Matthew 10:1–4 ಮತ್ತಾಯನು 10:1–4ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Mark 6:7 ಮಾರ್ಕನು 6:7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- Matthew 5:1 ಮತ್ತಾಯನು 5:1ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.