Mark · chapter 3 · verse 16
Mark 3:16 in Kannada
ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
Aatanu seemonanige petranendu hesarittanu.
Mark 3:16 in English
- King James Version (KJV)
- And Simon he surnamed Peter;
- World English Bible (WEB)
- Simon (to whom he gave the name Peter);
- American Standard Version (ASV)
- and Simon he surnamed Peter;
- Bible in Basic English (BBE)
- To Simon he gave the second name of Peter;
- Darby Translation (DBY)
- And he gave to Simon the surname of Peter;
- Webster's Bible (WBS)
- And Simon he surnamed Peter.
- Young's Literal Translation (YLT)
- And he put on Simon the name Peter;
Read in context
- 14ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
- 15ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
- 16ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
- 17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
- 18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
Cross references
- John 1:42 ಯೋಹಾನನು 1:4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- Galatians 2:7–9 ಗಲಾತ್ಯದವರಿಗೆ 2:7–9ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- Matthew 10:2–4 ಮತ್ತಾಯನು 10:2–4ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Mark 1:16 ಮಾರ್ಕನು 1:16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- Matthew 16:16–18 ಮತ್ತಾಯನು 16:16–18ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು. ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Luke 6:14–16 ಲೂಕನು 6:14–16ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ, ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.