Mark · chapter 3 · verse 4
Mark 3:4 in Kannada
ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
Aatanu avarige --sabbat divasagalalli olledannu maaduvadu nyaayavo illave kettaddannu maaduvadu nyaayavo? Praanavannu ulisuvado illave kolluvado endu kelidanu; aadare avaru summaniddaru.
Mark 3:4 in English
- King James Version (KJV)
- And he saith unto them, Is it lawful to do good on the sabbath days, or to do evil? to save life, or to kill? But they held their peace.
- World English Bible (WEB)
- He said to them, “Is it lawful on the Sabbath day to do good or to do harm? To save a life or to kill?” But they were silent.
- American Standard Version (ASV)
- And he saith unto them, Is it lawful on the sabbath day to do good, or to do harm? to save a life, or to kill? But they held their peace.
- Bible in Basic English (BBE)
- And he said to them, Is it right to do good on the Sabbath or to do evil? to give life or to put to death? But they said nothing.
- Darby Translation (DBY)
- And he says to them, Is it lawful on the sabbath to do good or to do evil, to save life or to kill? But they were silent.
- Webster's Bible (WBS)
- And he saith to them, Is it lawful to do good on the sabbath, or to do evil? to save life, or to kill? but they held their peace.
- Young's Literal Translation (YLT)
- And he saith to them, 'Is it lawful on the sabbaths to do good, or to do evil? life to save, or to kill?' but they were silent.
Read in context
- 2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- 3ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
- 4ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- 5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- 6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
Cross references
- Luke 6:9 ಲೂಕನು 6:9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- Luke 14:1–5 ಲೂಕನು 14:1–5ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು. ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು. ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು. ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
- Matthew 12:10–12 ಮತ್ತಾಯನು 12:10–12ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು. ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ? ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
- Luke 13:13–17 ಲೂಕನು 13:13–17ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು. ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Mark 2:27–28 ಮಾರ್ಕನು 2:27–28ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು. ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Mark 9:34 ಮಾರ್ಕನು 9:34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.