Mark · chapter 4 · verse 11
Mark 4:11 in Kannada
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
Adakke aatanu avarige--devara raajyada marmavannu tilidukollalu nimage kodalpattide. Aadare horaginavarige ivellavugalu saamyagalinda helalpaduttave.
Mark 4:11 in English
- King James Version (KJV)
- And he said unto them, Unto you it is given to know the mystery of the kingdom of God: but unto them that are without, all [these] things are done in parables:
- World English Bible (WEB)
- He said to them, “To you is given the mystery of God’s Kingdom, but to those who are outside, all things are done in parables,
- American Standard Version (ASV)
- And he said unto them, Unto you is given the mystery of the kingdom of God: but unto them that are without, all things are done in parables:
- Bible in Basic English (BBE)
- And he said to them, To you is given the secret of the kingdom of God, but to those who are outside, all things are given in the form of stories;
- Darby Translation (DBY)
- And he said to them, To you is given [to know] the mystery of the kingdom of God; but to them who are without, all things are done in parables,
- Webster's Bible (WBS)
- And he said to them, To you it is given to know the mystery of the kingdom of God: but to them that are without, all [these] things are done in parables:
- Young's Literal Translation (YLT)
- and he said to them, 'To you it hath been given to know the secret of the reign of God, but to those who are without, in similes are all the things done;
Read in context
- 9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- 11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- 12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- 13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
Cross references
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- James 1:16–18 ಯಾಕೋಬನು 1:16–18ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ. ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 1 Corinthians 5:12–13 1 ಕೊರಿಂಥದವರಿಗೆ 5:12–13ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ. ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- Ephesians 1:9 ಎಫೆಸದವರಿಗೆ 1:9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Ephesians 2:4–10 ಎಫೆಸದವರಿಗೆ 2:4–10ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.