Mark · chapter 4 · verse 16
Mark 4:16 in Kannada
ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
Ade prakaara bandeya nelada mele bittalpattavaru vaakyavannu kelidaaga koodale adannu santoshadinda angeekarisi
Mark 4:16 in English
- King James Version (KJV)
- And these are they likewise which are sown on stony ground; who, when they have heard the word, immediately receive it with gladness;
- World English Bible (WEB)
- These in the same way are those who are sown on the rocky places, who, when they have heard the word, immediately receive it with joy.
- American Standard Version (ASV)
- And these in like manner are they that are sown upon the rocky [places], who, when they have heard the word, straightway receive it with joy;
- Bible in Basic English (BBE)
- And in the same way, these are they who are planted on the stones, who, when the word has come to their ears, straight away take it with joy;
- Darby Translation (DBY)
- And these are they in like manner who are sown upon the rocky places, who when they hear the word, immediately receive it with joy,
- Webster's Bible (WBS)
- And these are they likewise who are sown on stony ground; who, when they have heard the word, immediately receive it with gladness;
- Young's Literal Translation (YLT)
- 'And these are they, in like manner, who on the rocky ground are sown: who, whenever they may hear the word, immediately with joy do receive it,
Read in context
- 14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
- 15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
- 16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
- 17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
- 18ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
Cross references
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- Matthew 13:20–21 ಮತ್ತಾಯನು 13:20–21ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Ezekiel 33:31–32 ಯೆಹೆಜ್ಕೇಲನು 33:31–32ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Matthew 8:19–20 ಮತ್ತಾಯನು 8:19–20ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು. ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Acts 8:13 ಅಪೊಸ್ತಲರ ಕೃತ್ಯಗಳು 8:13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- Acts 24:25–26 ಅಪೊಸ್ತಲರ ಕೃತ್ಯಗಳು 24:25–26ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Mark 10:17–22 ಮಾರ್ಕನು 10:17–22ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು. ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ. ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು. ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು. ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
- Acts 8:18–21 ಅಪೊಸ್ತಲರ ಕೃತ್ಯಗಳು 8:18–21ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.