Mark · chapter 4 · verse 22
Mark 4:22 in Kannada
ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
Yaakandare prakatavaagadante adagisalpattaddu yaavadoo illa; illave rahasyavaagi idalpattaddu yaavadoo bahirangavaagi iralaaradu.
Mark 4:22 in English
- King James Version (KJV)
- For there is nothing hid, which shall not be manifested; neither was any thing kept secret, but that it should come abroad.
- World English Bible (WEB)
- For there is nothing hidden except that it should be made known, neither was anything made secret but that it should come to light.
- American Standard Version (ASV)
- For there is nothing hid, save that it should be manifested; neither was [anything] made secret, but that it should come to light.
- Bible in Basic English (BBE)
- There is nothing covered which will not be seen openly, and nothing has been made secret which will not come to light.
- Darby Translation (DBY)
- For there is nothing hidden which shall not be made manifest; nor does any secret thing take place, but that it should come to light.
- Webster's Bible (WBS)
- For there is nothing hid, which shall not be manifested; neither hath any thing been kept secret, but that it should come abroad.
- Young's Literal Translation (YLT)
- for there is not anything hid that may not be manifested, nor was anything kept hid but that it may come to light.
Read in context
- 20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
- 21ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
- 22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
- 23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- 24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
Cross references
- Luke 8:17 ಲೂಕನು 8:17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Matthew 10:26–27 ಮತ್ತಾಯನು 10:26–27ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- Psalm 78:2–4 ಕೀರ್ತನೆಗಳು 78:2–4ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Psalm 40:9–10 ಕೀರ್ತನೆಗಳು 40:9–10ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Luke 12:2–3 ಲೂಕನು 12:2–3ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.