Mark · chapter 4 · verse 24
Mark 4:24 in Kannada
ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
Aatanu avarige--neevu keluvadaralli echcharavaagirri; neevu yaava alateyinda aleyutteero adu nimagoo aleyalpaduvadu; mattu keluvava raada nimage hechchaagi kodalpaduvadu.
Mark 4:24 in English
- King James Version (KJV)
- And he said unto them, Take heed what ye hear: with what measure ye mete, it shall be measured to you: and unto you that hear shall more be given.
- World English Bible (WEB)
- He said to them, “Take heed what you hear. With whatever measure you measure, it will be measured to you; and more will be given to you who hear.
- American Standard Version (ASV)
- And he said unto them, Take heed what ye hear: with what measure ye mete it shall be measured unto you; and more shall be given unto you.
- Bible in Basic English (BBE)
- And he said to them, Take care what you give ear to: in the same measure as you give you will get, and more will be given to you.
- Darby Translation (DBY)
- And he said to them, Take heed what ye hear; with what measure ye mete, it shall be meted to you; and there shall be [more] added to you.
- Webster's Bible (WBS)
- And he said to them, Take heed what ye hear: With the measure which ye give, it shall be measured to you: and to you that hear shall more be given.
- Young's Literal Translation (YLT)
- And he said to them, 'Take heed what ye hear; in what measure ye measure, it shall be measured to you; and to you who hear it shall be added;
Read in context
- 22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
- 23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- 24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- 25ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
- 26ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
Cross references
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Proverbs 19:27 ಜ್ಞಾನೋಕ್ತಿಗಳು 19:27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- Luke 6:37–38 ಲೂಕನು 6:37–38ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು. ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- John 5:25 ಯೋಹಾನನು 5:25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- Mark 9:7 ಮಾರ್ಕನು 9:7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.