Mark · chapter 4 · verse 32
Mark 4:32 in Kannada
ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
Aadare adu bittalpatta mele beledu aakaashada pakshigalu adara neralinalli vaasa maadu vashtu ellaa sasyagaliginta doddadaagi dodda kombegalannu biduttade endu helidanu.
Mark 4:32 in English
- King James Version (KJV)
- But when it is sown, it groweth up, and becometh greater than all herbs, and shooteth out great branches; so that the fowls of the air may lodge under the shadow of it.
- World English Bible (WEB)
- yet when it is sown, grows up and becomes greater than all the herbs, and puts out great branches, so that the birds of the sky can lodge under its shadow.”
- American Standard Version (ASV)
- yet when it is sown, groweth up, and becometh greater than all the herbs, and putteth out great branches; so that the birds of the heaven can lodge under the shadow thereof.
- Bible in Basic English (BBE)
- But when it is planted, it comes up, and becomes taller than all the plants, and puts out great branches, so that the birds of heaven are able to take rest in its shade.
- Darby Translation (DBY)
- and when it has been sown, mounts up and becomes greater than all herbs, and produces great branches, so that the birds of heaven can roost under its shadow.
- Webster's Bible (WBS)
- But when it is sown, it groweth up, and becometh greater than all herbs, and shooteth out great branches; so that the fowls of the air may lodge under its shade.
- Young's Literal Translation (YLT)
- and whenever it may be sown, it cometh up, and doth become greater than any of the herbs, and doth make great branches, so that under its shade the fowls of the heaven are able to rest.'
Read in context
- 30ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
- 31ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
- 32ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
- 33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
- 34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
Cross references
- Daniel 4:20–22 ದಾನಿಯೇಲನು 4:20–22ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ; ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Daniel 4:10–14 ದಾನಿಯೇಲನು 4:10–14ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು. ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು. ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- Ezekiel 31:3–10 ಯೆಹೆಜ್ಕೇಲನು 31:3–10ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
- Psalm 80:9–11 ಕೀರ್ತನೆಗಳು 80:9–11ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.