Mark · chapter 5 · verse 19
Mark 5:19 in Kannada
ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
Aadaagyoo yesu avanannu iragodade avanige--ninna manegoo snehitara baligoo hogi kartanu ninna mele karuneyittu enthaa mahatkaaryagalannu maadi ddaanendu avarige helu andanu.
Mark 5:19 in English
- King James Version (KJV)
- Howbeit Jesus suffered him not, but saith unto him, Go home to thy friends, and tell them how great things the Lord hath done for thee, and hath had compassion on thee.
- World English Bible (WEB)
- He didn’t allow him, but said to him, “Go to your house, to your friends, and tell them what great things the Lord has done for you and how he had mercy on you.”
- American Standard Version (ASV)
- And he suffered him not, but saith unto him, Go to thy house unto thy friends, and tell them how great things the Lord hath done for thee, and [how] he had mercy on thee.
- Bible in Basic English (BBE)
- And he would not let him, but said to him, Go to your house, to your friends, and give them news of the great things the Lord has done for you, and how he had mercy on you.
- Darby Translation (DBY)
- And he suffered him not, but says to him, Go to thine home to thine own people, and tell them how great things the Lord has done for thee, and has had mercy on thee.
- Webster's Bible (WBS)
- Yet Jesus suffered him not, but saith to him, Go home to thy friends, and tell them how great things the Lord hath done for thee, and hath had compassion on thee.
- Young's Literal Translation (YLT)
- and Jesus did not suffer him, but saith to him, 'Go away to thy house, unto thine own [friends], and tell them how great things the Lord did to thee, and dealt kindly with thee;
Read in context
- 17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- 18ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
- 19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
- 20ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- 21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
Cross references
- Psalm 66:16 ಕೀರ್ತನೆಗಳು 66:16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- John 4:29 ಯೋಹಾನನು 4:29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- Daniel 4:1–3 ದಾನಿಯೇಲನು 4:1–3ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ. ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Isaiah 38:9–20 ಯೆಶಾಯ 38:9–20ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು-- ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು. ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು. ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು. ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ. ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು. ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- Daniel 6:25–27 ದಾನಿಯೇಲನು 6:25–27ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ. ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು. ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Acts 26:4–29 ಅಪೊಸ್ತಲರ ಕೃತ್ಯಗಳು 26:4–29ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ. ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ. ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ. ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ? ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು. ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು. ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು. ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು. ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು. ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು. ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ. ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ. ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು. ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು. ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Acts 22:1–21 ಅಪೊಸ್ತಲರ ಕೃತ್ಯಗಳು 22:1–21ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ. (ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು-- ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು. ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು. ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು. ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ. ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು. ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು. ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು. ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ. ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ. ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು. ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು. ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು. ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Jonah 2:1–10 ಯೋನ 2:1–10ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು. ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ. ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು. ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.