Mark · chapter 5 · verse 25
Mark 5:25 in Kannada
ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
Aaga hanneradu varushagalinda raktasraavavidda obba streeyu
Mark 5:25 in English
- King James Version (KJV)
- And a certain woman, which had an issue of blood twelve years,
- World English Bible (WEB)
- A certain woman who had a discharge of blood for twelve years,
- American Standard Version (ASV)
- And a woman, who had an issue of blood twelve years,
- Bible in Basic English (BBE)
- And a woman, who had had a flow of blood for twelve years,
- Darby Translation (DBY)
- And a certain woman who had had a flux of blood twelve years,
- Webster's Bible (WBS)
- And a certain woman who had an issue of blood twelve years,
- Young's Literal Translation (YLT)
- and a certain woman, having an issue of blood twelve years,
Read in context
- 23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- 24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
- 25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- 26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
- 27ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
Cross references
- Leviticus 15:25–27 ಯಾಜಕಕಾಂಡ 15:25–27ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- Luke 8:43–44 ಲೂಕನು 8:43–44ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
- Matthew 9:20–22 ಮತ್ತಾಯನು 9:20–22ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು. ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Leviticus 15:19–20 ಯಾಜಕಕಾಂಡ 15:19–20ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
- John 5:5–6 ಯೋಹಾನನು 5:5–6ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು. ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
- Luke 13:11 ಲೂಕನು 13:11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
- Acts 9:33–34 ಅಪೊಸ್ತಲರ ಕೃತ್ಯಗಳು 9:33–34ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- Acts 4:22 ಅಪೊಸ್ತಲರ ಕೃತ್ಯಗಳು 4:22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.