Mark · chapter 5 · verse 36
Mark 5:36 in Kannada
ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
Haage heliddannu yesu kelida koodale aa sabhaamandirada adhikaarige--bhaya padabeda, nambike maatra irali andanu.
Mark 5:36 in English
- King James Version (KJV)
- As soon as Jesus heard the word that was spoken, he saith unto the ruler of the synagogue, Be not afraid, only believe.
- World English Bible (WEB)
- But Jesus, when he heard the message spoken, immediately said to the ruler of the synagogue, “Don’t be afraid, only believe.”
- American Standard Version (ASV)
- But Jesus, not heeding the word spoken, saith unto the ruler of the synagogue, Fear not, only believe.
- Bible in Basic English (BBE)
- But Jesus, giving no attention to their words, said to the ruler of the Synagogue, Have no fear, only have faith.
- Darby Translation (DBY)
- But Jesus [immediately], having heard the word spoken, says to the ruler of the synagogue, Fear not; only believe.
- Webster's Bible (WBS)
- As soon as Jesus heard the word that was spoken, he saith to the ruler of the synagogue, Be not afraid, only believe,
- Young's Literal Translation (YLT)
- And Jesus immediately, having heard the word that is spoken, saith to the chief of the synagogue, 'Be not afraid, only believe.'
Read in context
- 34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- 35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
- 36ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- 37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- 38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
Cross references
- Luke 8:50 ಲೂಕನು 8:50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
- Matthew 9:28–29 ಮತ್ತಾಯನು 9:28–29ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Romans 4:18–24 ರೋಮಾಪುರದವರಿಗೆ 4:18–24ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- John 4:48–50 ಯೋಹಾನನು 4:48–50ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು. ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.