Mark · chapter 6 · verse 52
Mark 6:52 in Kannada
ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
Avara hrudayavu kathinavaagi ddadarinda avaru rottigala adbhutavannu grahisa lilla.
Mark 6:52 in English
- King James Version (KJV)
- For they considered not [the miracle] of the loaves: for their heart was hardened.
- World English Bible (WEB)
- for they hadn’t understood about the loaves, but their hearts were hardened.
- American Standard Version (ASV)
- for they understood not concerning the loaves, but their heart was hardened.
- Bible in Basic English (BBE)
- For it was not clear to them about the bread; but their hearts were hard.
- Darby Translation (DBY)
- for they understood not through the loaves: for their heart was hardened.
- Webster's Bible (WBS)
- For they considered not [the miracle] of the loaves; for their heart was hardened.
- Young's Literal Translation (YLT)
- for they understood not concerning the loaves, for their heart hath been hard.
Read in context
- 50ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- 51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- 52ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
- 53ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
- 54ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ
Cross references
- Mark 8:17–21 ಮಾರ್ಕನು 8:17–21ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Matthew 16:9–11 ಮತ್ತಾಯನು 16:9–11ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ? ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- Mark 7:18 ಮಾರ್ಕನು 7:18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- Romans 11:7 ರೋಮಾಪುರದವರಿಗೆ 11:7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.