Mark · chapter 6 · verse 6
Mark 6:6 in Kannada
ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
Aatanu avara apanambike ya deseyinda aashcharyapattanu; mattu suttalina halligalige hogi bodhisuttaa iddanu.
Mark 6:6 in English
- King James Version (KJV)
- And he marvelled because of their unbelief. And he went round about the villages, teaching.
- World English Bible (WEB)
- He marveled because of their unbelief. He went around the villages teaching.
- American Standard Version (ASV)
- And he marvelled because of their unbelief. And he went round about the villages teaching.
- Bible in Basic English (BBE)
- And he was greatly surprised because they had no faith. And he went about the country places teaching.
- Darby Translation (DBY)
- And he wondered because of their unbelief. And he went round the villages in a circuit, teaching.
- Webster's Bible (WBS)
- And he marveled because of their unbelief. And he went around the villages teaching.
- Young's Literal Translation (YLT)
- and he wondered because of their unbelief. And he was going round the villages, in a circle, teaching,
Read in context
- 4ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
- 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
- 6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
- 7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- 8ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
Cross references
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Matthew 8:10 ಮತ್ತಾಯನು 8:10ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Luke 13:22 ಲೂಕನು 13:22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Isaiah 59:16 ಯೆಶಾಯ 59:16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
- Jeremiah 2:11 ಯೆರೆಮೀಯ 2:11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- John 9:30 ಯೋಹಾನನು 9:30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- Luke 4:31 ಲೂಕನು 4:31ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
- Mark 1:39 ಮಾರ್ಕನು 1:39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
- Luke 4:44 ಲೂಕನು 4:44ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.