Mark · chapter 7 · verse 9
Mark 7:9 in Kannada
ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
Aatanu avarige--neevu nimma sampra daayavannu kaikolluvante daivaajnyeyannu sampoornavaagi asadde maadutteeri.
Mark 7:9 in English
- King James Version (KJV)
- And he said unto them, Full well ye reject the commandment of God, that ye may keep your own tradition.
- World English Bible (WEB)
- He said to them, “Full well do you reject the commandment of God, that you may keep your tradition.
- American Standard Version (ASV)
- And he said unto them, Full well do ye reject the commandment of God, that ye may keep your tradition.
- Bible in Basic English (BBE)
- And he said to them, Truly you put on one side the law of God, so that you may keep the rules which have been handed down to you.
- Darby Translation (DBY)
- And he said to them, Well do ye set aside the commandment of God, that ye may observe what is delivered by yourselves [to keep].
- Webster's Bible (WBS)
- And he said to them, Full well ye reject the commandment of God, that ye may keep your own tradition,
- Young's Literal Translation (YLT)
- And he said to them, 'Well do ye put away the command of God that your tradition ye may keep;
Read in context
- 7ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
- 8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
- 9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
- 10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- 11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
Cross references
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Jeremiah 44:16–17 ಯೆರೆಮೀಯ 44:16–17ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Isaiah 24:5 ಯೆಶಾಯ 24:5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- Psalm 119:126 ಕೀರ್ತನೆಗಳು 119:126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
- Matthew 15:3–6 ಮತ್ತಾಯನು 15:3–6ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Mark 7:13 ಮಾರ್ಕನು 7:13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Mark 7:3 ಮಾರ್ಕನು 7:3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
- 2 Kings 16:10–16 2 ಅರಸುಗಳು 16:10–16ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು. ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು. ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು. ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು. ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.