Mark · chapter 8 · verse 12
Mark 8:12 in Kannada
ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Aatanu tanna aatmadalli deerghavaagi nittusirubittu--ee santa tiyu soochakakaaryavannu hudukuvadu yaake? Ee santatige yaava soochakakaaryavoo kodalpadu vadillavendu naanu nimage nijavaagi heluttene andanu.
Mark 8:12 in English
- King James Version (KJV)
- And he sighed deeply in his spirit, and saith, Why doth this generation seek after a sign? verily I say unto you, There shall no sign be given unto this generation.
- World English Bible (WEB)
- He sighed deeply in his spirit and said, “Why does this generation seek a sign? Most certainly I tell you, no sign will be given to this generation.”
- American Standard Version (ASV)
- And he sighed deeply in his spirit, and saith, Why doth this generation seek a sign? verily I say unto you, There shall no sign be given unto this generation.
- Bible in Basic English (BBE)
- And he was very sad in spirit, and said, Why is this generation looking for a sign? truly, I say to you, No sign will be given to this generation.
- Darby Translation (DBY)
- And groaning in his spirit, he says, Why does this generation seek a sign? Verily I say unto you, A sign shall in no wise be given to this generation.
- Webster's Bible (WBS)
- And he sighed deeply in his spirit, and saith, Why doth this generation seek for a sign? Verily I say to you, There shall no sign be given to this generation.
- Young's Literal Translation (YLT)
- and having sighed deeply in his spirit, he saith, 'Why doth this generation seek after a sign? Verily I say to you, no sign shall be given to this generation.'
Read in context
- 10ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.
- 11ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
- 12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 13ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
- 14ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
Cross references
- Matthew 12:39–40 ಮತ್ತಾಯನು 12:39–40ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Mark 7:34 ಮಾರ್ಕನು 7:34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
- John 12:37–43 ಯೋಹಾನನು 12:37–43ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು. ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- Luke 11:29–30 ಲೂಕನು 11:29–30ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು. ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Luke 22:67–70 ಲೂಕನು 22:67–70ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ; ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ. ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- John 11:33–38 ಯೋಹಾನನು 11:33–38ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. ಯೇಸು ಅತ್ತನು. ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Luke 16:29–31 ಲೂಕನು 16:29–31ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.