Mark · chapter 8 · verse 20
Mark 8:20 in Kannada
ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
Mattu aa elu rottigalannu naalku saavira janara madhyadalli muridaaga eshtu puttigala tumba tundugalannu ettidiri endu kelalu avaru--elu andaru.
Mark 8:20 in English
- King James Version (KJV)
- And when the seven among four thousand, how many baskets full of fragments took ye up? And they said, Seven.
- World English Bible (WEB)
- “When the seven loaves fed the four thousand, how many baskets full of broken pieces did you take up?” They told him, “Seven.”
- American Standard Version (ASV)
- And when the seven among the four thousand, how many basketfuls of broken pieces took ye up? And they say unto him, Seven.
- Bible in Basic English (BBE)
- And when the seven among the four thousand, what number of baskets full of broken bits did you take up? And they said to him, Seven.
- Darby Translation (DBY)
- And when the seven for the four thousand, the filling of how many baskets of fragments took ye up? And they said, Seven.
- Webster's Bible (WBS)
- And when the seven among four thousand, how many baskets full of fragments took ye up? And they said, Seven.
- Young's Literal Translation (YLT)
- 'And when the seven to the four thousand, how many hand-baskets full of broken pieces took ye up?' and they said, 'Seven.'
Read in context
- 18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- 19ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
- 20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
- 21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
Cross references
- Matthew 15:34–38 ಮತ್ತಾಯನು 15:34–38ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು. ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- Mark 8:1–9 ಮಾರ್ಕನು 8:1–9ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು. ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು. ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು. ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.