Mark · chapter 8 · verse 28
Mark 8:28 in Kannada
ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
Avaru pratyuttara vaagi--baaptisma maadisuva yohaananu; matte kelavaru--eleeyanu; innu kelavaru--pravaadi galalli obbanu annuttaare endu helidaru.
Mark 8:28 in English
- King James Version (KJV)
- And they answered, John the Baptist: but some [say], Elias; and others, One of the prophets.
- World English Bible (WEB)
- They told him, “John the Baptizer, and others say Elijah, but others, one of the prophets.”
- American Standard Version (ASV)
- And they told him, saying, John the Baptist; and others, Elijah; but others, One of the prophets.
- Bible in Basic English (BBE)
- And they made answer, John the Baptist; and others, Elijah; but others, One of the prophets.
- Darby Translation (DBY)
- And they answered him, saying, John the baptist; and others, Elias; but others, One of the prophets.
- Webster's Bible (WBS)
- And they answered, John the Baptist: but some [say] , Elijah; and others, One of the prophets,
- Young's Literal Translation (YLT)
- And they answered, 'John the Baptist, and others Elijah, but others one of the prophets.'
Read in context
- 26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
- 27ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
- 28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
- 29ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
- 30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Cross references
- John 1:21 ಯೋಹಾನನು 1:21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
- Matthew 14:2 ಮತ್ತಾಯನು 14:2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Mark 9:11–13 ಮಾರ್ಕನು 9:11–13ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Luke 9:7–9 ಲೂಕನು 9:7–9ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು. ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು. ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
- Mark 6:14–16 ಮಾರ್ಕನು 6:14–16ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು. ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು. ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
- Matthew 16:14 ಮತ್ತಾಯನು 16:14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.