Mark · chapter 8 · verse 36
Mark 8:36 in Kannada
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
Obba manushyanu lokavannellaa sampaadisi kondaroo tanna svanta aatmavannu nashtapadisikondare avanige laabhavenu?
Mark 8:36 in English
- King James Version (KJV)
- For what shall it profit a man, if he shall gain the whole world, and lose his own soul?
- World English Bible (WEB)
- For what does it profit a man to gain the whole world and forfeit his life?
- American Standard Version (ASV)
- For what doth it profit a man, to gain the whole world, and forfeit his life?
- Bible in Basic English (BBE)
- What profit has a man if he gets all the world with the loss of his life?
- Darby Translation (DBY)
- For what shall it profit a man if he gain the whole world and suffer the loss of his soul?
- Webster's Bible (WBS)
- For what shall it profit a man, if he shall gain the whole world, and lose his own soul:
- Young's Literal Translation (YLT)
- for what shall it profit a man, if he may gain the whole world, and forfeit his life?
Read in context
- 34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
- 35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
- 36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
- 37ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- 38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
Cross references
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Psalm 49:17 ಕೀರ್ತನೆಗಳು 49:17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Luke 9:25 ಲೂಕನು 9:25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- James 1:9–11 ಯಾಕೋಬನು 1:9–11ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Philippians 3:7–9 ಫಿಲಿಪ್ಪಿಯವರಿಗೆ 3:7–9ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Hebrews 11:24–26 ಇಬ್ರಿಯರಿಗೆ 11:24–26ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Revelation 18:7–8 ಪ್ರಕಟನೆ 18:7–8ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Luke 16:19–23 ಲೂಕನು 16:19–23ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.