Mark · chapter 9 · verse 21
Mark 9:21 in Kannada
ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
Aatanu avana tandege--idu avanannu hididu eshtu kaalavaayitu endu kelalu avanu-- baalyadindale;
Mark 9:21 in English
- King James Version (KJV)
- And he asked his father, How long is it ago since this came unto him? And he said, Of a child.
- World English Bible (WEB)
- He asked his father, “How long has it been since this has been happening to him?” He said, “From childhood.
- American Standard Version (ASV)
- And he asked his father, How long time is it since this hath come unto him? And he said, From a child.
- Bible in Basic English (BBE)
- And Jesus questioning the father said, How long has he been like this? And he said, From a child.
- Darby Translation (DBY)
- And he asked his father, How long a time is it that it has been like this with him? And he said, From childhood;
- Webster's Bible (WBS)
- And he asked his father, How long is it since this came to him? and he said, From a child.
- Young's Literal Translation (YLT)
- And he questioned his father, 'How long time is it since this came to him?' and he said, 'From childhood,
Read in context
- 19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- 20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
- 21ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
- 22ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- 23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
Cross references
- John 9:20–21 ಯೋಹಾನನು 9:20–21ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
- Acts 9:33 ಅಪೊಸ್ತಲರ ಕೃತ್ಯಗಳು 9:33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- Luke 13:16 ಲೂಕನು 13:16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- Job 5:7 ಯೋಬನು 5:7ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
- Mark 5:25 ಮಾರ್ಕನು 5:25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- John 9:1 ಯೋಹಾನನು 9:1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
- Acts 4:22 ಅಪೊಸ್ತಲರ ಕೃತ್ಯಗಳು 4:22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- John 5:5–6 ಯೋಹಾನನು 5:5–6ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು. ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Job 14:1 ಯೋಬನು 14:1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- Acts 14:8 ಅಪೊಸ್ತಲರ ಕೃತ್ಯಗಳು 14:8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.