Mark · chapter 9 · verse 34
Mark 9:34 in Kannada
ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
Aadare avaru summaniddaru; yaakandare avaru tammolage yaavanu ati doddavanaagirabekendu daari yalli vaagvaada maadiddaru.
Mark 9:34 in English
- King James Version (KJV)
- But they held their peace: for by the way they had disputed among themselves, who [should be] the greatest.
- World English Bible (WEB)
- But they were silent, for they had disputed with one another on the way about who was the greatest.
- American Standard Version (ASV)
- But they held their peace: for they had disputed one with another on the way, who [was] the greatest.
- Bible in Basic English (BBE)
- But they said nothing: because they had had an argument between themselves on the way, about who was the greatest.
- Darby Translation (DBY)
- And they remained silent, for by the way they had been reasoning with one another who [was] greatest.
- Webster's Bible (WBS)
- But they held their peace: for by the way they had disputed among themselves, who [should be] the greatest.
- Young's Literal Translation (YLT)
- and they were silent, for with one another they did reason in the way who is greater;
Read in context
- 32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- 33ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
- 34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
- 35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
- 36ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
Cross references
- Mark 9:50 ಮಾರ್ಕನು 9:50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Luke 22:24–30 ಲೂಕನು 22:24–30ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ. ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ. ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Philippians 2:3–7 ಫಿಲಿಪ್ಪಿಯವರಿಗೆ 2:3–7ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- Luke 9:46–48 ಲೂಕನು 9:46–48ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು. ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- 3 John 1:9 3 ಯೋಹಾನನು 1:9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
- Matthew 20:21–24 ಮತ್ತಾಯನು 20:21–24ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
- Matthew 18:1–5 ಮತ್ತಾಯನು 18:1–5ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು. ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ-- ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.