Mark · chapter 9 · verse 37
Mark 9:37 in Kannada
ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
Yaavanaadaroo intha makkalalli ondannu nanna hesarinalli angeekarisidare nannannu angeekarisuttaane; mattu yaavanu nannannu angeekarisuvano avanu nannannallade nannannu kaluhisidaatananne angeekarisuttaane andanu.
Mark 9:37 in English
- King James Version (KJV)
- Whosoever shall receive one of such children in my name, receiveth me: and whosoever shall receive me, receiveth not me, but him that sent me.
- World English Bible (WEB)
- “Whoever receives one such little child in my name receives me; and whoever receives me, doesn’t receive me, but him who sent me.”
- American Standard Version (ASV)
- Whosoever shall receive one of such little children in my name, receiveth me: and whosoever receiveth me, receiveth not me, but him that sent me.
- Bible in Basic English (BBE)
- Whoever will give honour to one such little child in my name, gives honour to me: and whoever gives honour to me, gives honour not to me, but to him who sent me.
- Darby Translation (DBY)
- Whosoever shall receive one of such little children in my name, receives me; and whosoever shall receive me, does not receive me, but him who sent me.
- Webster's Bible (WBS)
- Whoever shall receive one of such children in my name, receiveth me: and whoever shall receive me, receiveth not me, but him that sent me.
- Young's Literal Translation (YLT)
- 'Whoever may receive one of such children in my name, doth receive me, and whoever may receive me, doth not receive me, but Him who sent me.'
Read in context
- 35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
- 36ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
- 37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- 38ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
- 39ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
Cross references
- Matthew 18:3–5 ಮತ್ತಾಯನು 18:3–5ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Matthew 10:40–42 ಮತ್ತಾಯನು 10:40–42ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- John 12:44–45 ಯೋಹಾನನು 12:44–45ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ. ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.