Mark · chapter 9 · verse 47
Mark 9:47 in Kannada
ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
Ninna kannu ninage abhyantara maadidare adannu kittubidu; eradu kannugalullavanaagi narakada benkiyalli haaka lpaduvadakkinta ondu kannullavanaagi devara raajya dalli seruvadu ninage olledu.
Mark 9:47 in English
- King James Version (KJV)
- And if thine eye offend thee, pluck it out: it is better for thee to enter into the kingdom of God with one eye, than having two eyes to be cast into hell fire:
- World English Bible (WEB)
- If your eye causes you to stumble, throw it out. It is better for you to enter into God’s Kingdom with one eye, rather than having two eyes to be cast into the Gehenna of fire,
- American Standard Version (ASV)
- And if thine eye cause thee to stumble, cast it out: it is good for thee to enter into the kingdom of God with one eye, rather than having two eyes to be cast into hell;
- Bible in Basic English (BBE)
- And if your eye is a cause of trouble to you, take it out: it is better for you to go into the kingdom of God with one eye than, having two eyes, to go into hell,
- Darby Translation (DBY)
- And if thine eye serve as a snare to thee, cast it out: it is better for thee to enter into the kingdom of God with one eye, rather than having two eyes to be cast into the hell of fire,
- Webster's Bible (WBS)
- And if thy eye causeth thee to fall into sin, pluck it out: it is better for thee to enter into the kingdom of God with one eye, than having two eyes, to be cast into hell-fire.
- Young's Literal Translation (YLT)
- And if thine eye may cause thee to stumble, cast it out; it is better for thee one-eyed to enter into the reign of God, than having two eyes, to be cast to the gehenna of the fire —
Read in context
- 45ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
- 46ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 47ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
- 48ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 49ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
Cross references
- Matthew 18:9 ಮತ್ತಾಯನು 18:9ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Matthew 5:28–29 ಮತ್ತಾಯನು 5:28–29ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ. ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Job 31:1 ಯೋಬನು 31:1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Mark 9:43 ಮಾರ್ಕನು 9:43ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Matthew 10:37–39 ಮತ್ತಾಯನು 10:37–39ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ. ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Galatians 4:15 ಗಲಾತ್ಯದವರಿಗೆ 4:15ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.