Matthew · chapter 1 · verse 5
Matthew 1:5 in Kannada
ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
Salmonaninda raahaabalalli bovajanu hutti danu; bovajaninda rootalalli obedanu huttidanu; obedaninda ishayanu huttidanu;
Matthew 1:5 in English
- King James Version (KJV)
- And Salmon begat Booz of Rachab; and Booz begat Obed of Ruth; and Obed begat Jesse;
- World English Bible (WEB)
- Salmon became the father of Boaz by Rahab. Boaz became the father of Obed by Ruth. Obed became the father of Jesse.
- American Standard Version (ASV)
- and Salmon begat Boaz of Rahab; and Boaz begat Obed of Ruth; and Obed begat Jesse;
- Bible in Basic English (BBE)
- And the son of Salmon by Rahab was Boaz; and the son of Boaz by Ruth was Obed; and the son of Obed was Jesse;
- Darby Translation (DBY)
- and Salmon begat Booz of Rachab; and Booz begat Obed of Ruth; and Obed begat Jesse,
- Webster's Bible (WBS)
- And Salmon begat Booz of Rachab; and Booz begat Obed of Ruth; and Obed begat Jesse;
- Young's Literal Translation (YLT)
- and Salmon begat Boaz of Rahab, and Boaz begat Obed of Ruth, and Obed begat Jesse,
Read in context
- 3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- 4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- 5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- 6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
Cross references
- Ruth 1:16–17 ರೂತಳು 1:16–17ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- James 2:25 ಯಾಕೋಬನು 2:25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Ruth 1:4 ರೂತಳು 1:4ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
- Joshua 6:22–25 ಯೆಹೋಶುವ 6:22–25ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು. ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
- Ruth 4:21 ರೂತಳು 4:21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- 1 Chronicles 2:11–12 1 ಪೂರ್ವಕಾಲವೃತ್ತಾಂತ 2:11–12ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
- Joshua 2:1–22 ಯೆಹೋಶುವ 2:1–22ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು. ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು. ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು. ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು. ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು. ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು. ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ-- ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ. ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು. ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು. ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು. ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು. ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು. ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು. ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು. ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
- Luke 3:32 ಲೂಕನು 3:32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
Original words (Greek)
- And · G1161δέ dé
- Salmon · G4533Σαλμών Salmṓn
- begat · G1080γεννάω gennáō
- Booz · G1003Βοόζ Boóz
- of · G1537ἐκ ek
- Rachab · G4477Ῥαχάβ Rhacháb
- and · G1161δέ dé
- Booz · G1003Βοόζ Boóz
- begat · G1080γεννάω gennáō
- Obed · G5601Ὠβήδ Ōbḗd
- of · G1537ἐκ ek
- Ruth · G4503Ῥούθ Rhoúth
- and · G1161δέ dé
- Obed · G5601Ὠβήδ Ōbḗd
- begat · G1080γεννάω gennáō
- Jesse · G2421Ἰεσσαί Iessaí