Matthew · chapter 1 · verse 8
Matthew 1:8 in Kannada
ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
Aasaninda yehoshaaphaatanu huttidanu; yehoshaa phaataninda yehoraamanu huttidanu; yeho raamaninda ujjeeyanu huttidanu;
Matthew 1:8 in English
- King James Version (KJV)
- And Asa begat Josaphat; and Josaphat begat Joram; and Joram begat Ozias;
- World English Bible (WEB)
- Asa became the father of Jehoshaphat. Jehoshaphat became the father of Joram. Joram became the father of Uzziah.
- American Standard Version (ASV)
- and Asa begat Jehoshaphat; and Jehoshaphat begat Joram; and Joram begat Uzziah;
- Bible in Basic English (BBE)
- And the son of Asa was Jehoshaphat; and the son of Jehoshaphat was Joram; and the son of Joram was Uzziah;
- Darby Translation (DBY)
- and Asa begat Josaphat, and Josaphat begat Joram, and Joram begat Ozias,
- Webster's Bible (WBS)
- And Asa begat Josaphat; and Josaphat begat Joram; and Joram begat Ozias;
- Young's Literal Translation (YLT)
- and Asa begat Jehoshaphat, and Jehoshaphat begat Joram, and Joram begat Uzziah,
Read in context
- 6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
- 8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
- 9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- 10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
Cross references
- 1 Chronicles 3:11 1 ಪೂರ್ವಕಾಲವೃತ್ತಾಂತ 3:11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 2 Kings 8:16 2 ಅರಸುಗಳು 8:16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
- 2 Chronicles 26:1–23 2 ಪೂರ್ವಕಾಲವೃತ್ತಾಂತ 26:1–23ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು. ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು. ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು. ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು. ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು. ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು. ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು. ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು. ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು. ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು. ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು. ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು. ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು. ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 1 Kings 15:24 1 ಅರಸುಗಳು 15:24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 2 Chronicles 21:1 2 ಪೂರ್ವಕಾಲವೃತ್ತಾಂತ 21:1ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 17:1–19 2 ಪೂರ್ವಕಾಲವೃತ್ತಾಂತ 17:1–19ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು; ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು. ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು. ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು. ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು. ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು. ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು. ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ. ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು. ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು. ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 2 Kings 3:1 2 ಅರಸುಗಳು 3:1ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
- 1 Kings 22:2–50 1 ಅರಸುಗಳು 22:2–50ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು. ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು. ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು. ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು. ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು. ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು. ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು. ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು. ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು. ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು. ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು. ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು. ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು. ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು. ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು. ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು. ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ. ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 2 Kings 15:1–6 2 ಅರಸುಗಳು 15:1–6ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು. ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು. ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು. ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು. ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.