Matthew · chapter 10 · verse 15
Matthew 10:15 in Kannada
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
Naanu nimage nijavaagi heluttene--nyaayateerpina dinadalli aa pattanakkinta sodom gomora pattanagala gatiyu taalabahudaagiruvadu.
Matthew 10:15 in English
- King James Version (KJV)
- Verily I say unto you, It shall be more tolerable for the land of Sodom and Gomorrha in the day of judgment, than for that city.
- World English Bible (WEB)
- Most certainly I tell you, it will be more tolerable for the land of Sodom and Gomorrah in the day of judgment than for that city.
- American Standard Version (ASV)
- Verily I say unto you, It shall be more tolerable for the land of Sodom and Gomorrah in the day of judgment, than for that city.
- Bible in Basic English (BBE)
- Truly I say to you, It will be better for the land of Sodom and Gomorrah in the day of God's judging than for that town.
- Darby Translation (DBY)
- Verily I say unto you, It shall be more tolerable for the land of Sodom and Gomorrha in judgment-day than for that city.
- Webster's Bible (WBS)
- Verily, I say to you, It shall be more tolerable for the land of Sodom and Gomorrah, in the day of judgment, than for that city.
- Young's Literal Translation (YLT)
- verily I say to you, It shall be more tolerable for the land of Sodom and Gomorrah in the day of judgment than for that city.
Read in context
- 13ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- 14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
- 15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
- 16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
Cross references
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- John 15:22–24 ಯೋಹಾನನು 15:22–24ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Luke 10:11–12 ಲೂಕನು 10:11–12ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- Matthew 11:22–24 ಮತ್ತಾಯನು 11:22–24ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Ezekiel 16:48–56 ಯೆಹೆಜ್ಕೇಲನು 16:48–56ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
- 1 John 4:17 1 ಯೋಹಾನನು 4:17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 24:34–35 ಮತ್ತಾಯನು 24:34–35ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.