Matthew · chapter 10 · verse 18
Matthew 10:18 in Kannada
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
Idallade nanna nimittavaagi nimmannu adhi kaarigala mattu arasugala mundakke tegedukondu hoguvaru. Heege avarigoo anyajanagaligoo saakshiyaaguvadu.
Matthew 10:18 in English
- King James Version (KJV)
- And ye shall be brought before governors and kings for my sake, for a testimony against them and the Gentiles.
- World English Bible (WEB)
- Yes, and you will be brought before governors and kings for my sake, for a testimony to them and to the nations.
- American Standard Version (ASV)
- yea and before governors and kings shall ye be brought for my sake, for a testimony to them and to the Gentiles.
- Bible in Basic English (BBE)
- And you will come before rulers and kings because of me, for a witness to them and to the Gentiles.
- Darby Translation (DBY)
- and ye shall be brought before rulers and kings for my sake, for a testimony to them and to the nations.
- Webster's Bible (WBS)
- And ye will be brought before governors and kings for my sake, for a testimony against them and the Gentiles.
- Young's Literal Translation (YLT)
- and before governors and kings ye shall be brought for my sake, for a testimony to them and to the nations.
Read in context
- 16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- 18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- 19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- 20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
Cross references
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Acts 24:1–26 ಅಪೊಸ್ತಲರ ಕೃತ್ಯಗಳು 24:1–26ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು. ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ. ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ; ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು. ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ. ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು. ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು. ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು. ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Acts 5:25–27 ಅಪೊಸ್ತಲರ ಕೃತ್ಯಗಳು 5:25–27ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು. ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- Psalm 2:1–6 ಕೀರ್ತನೆಗಳು 2:1–6ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Mark 13:9 ಮಾರ್ಕನು 13:9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- Acts 12:1–4 ಅಪೊಸ್ತಲರ ಕೃತ್ಯಗಳು 12:1–4ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು). ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Acts 23:33–34 ಅಪೊಸ್ತಲರ ಕೃತ್ಯಗಳು 23:33–34ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು. ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.