Matthew · chapter 10 · verse 21
Matthew 10:21 in Kannada
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
Sahodaranu tanna sahodaranannoo tandeyu maganannoo maranakke oppisuvaru; mattu makkalu tandetaayigalige virodhavaagi eddu avarannu kollisuvaru.
Matthew 10:21 in English
- King James Version (KJV)
- And the brother shall deliver up the brother to death, and the father the child: and the children shall rise up against [their] parents, and cause them to be put to death.
- World English Bible (WEB)
- “Brother will deliver up brother to death, and the father his child. Children will rise up against parents and cause them to be put to death.
- American Standard Version (ASV)
- And brother shall deliver up brother to death, and the father his child: and children shall rise up against parents, and cause them to be put to death.
- Bible in Basic English (BBE)
- And brother will give up brother to death, and the father his child: and children will go against their fathers and mothers, and put them to death.
- Darby Translation (DBY)
- But brother shall deliver up brother to death, and father child; and children shall rise up against parents and shall put them to death;
- Webster's Bible (WBS)
- And the brother will deliver up the brother to death, and the father the child: and the children will rise up against [their] parents, and cause them to be put to death.
- Young's Literal Translation (YLT)
- 'And brother shall deliver up brother to death, and father child, and children shall rise up against parents, and shall put them to death,
Read in context
- 19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- 20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- 21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- 22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- 23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Cross references
- Luke 21:16–17 ಲೂಕನು 21:16–17ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Mark 13:12–13 ಮಾರ್ಕನು 13:12–13ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Luke 12:51–53 ಲೂಕನು 12:51–53ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು. ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- Matthew 10:34–36 ಮತ್ತಾಯನು 10:34–36ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ; ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Zechariah 13:3 ಜೆಕರ್ಯ 13:3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- 2 Samuel 17:1–4 2 ಸಮುವೇಲನು 17:1–4ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- 2 Samuel 16:11 2 ಸಮುವೇಲನು 16:11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
- Job 19:19 ಯೋಬನು 19:19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.