Matthew · chapter 10 · verse 27
Matthew 10:27 in Kannada
ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
Naanu nimage kattaleyalli yaavadannu helutteno adannu neevu belakinalli maatanaadiri; neevu kiviyalli yaavadannu kelutteero adannu maaligegala mele saariri.
Matthew 10:27 in English
- King James Version (KJV)
- What I tell you in darkness, [that] speak ye in light: and what ye hear in the ear, [that] preach ye upon the housetops.
- World English Bible (WEB)
- What I tell you in the darkness, speak in the light; and what you hear whispered in the ear, proclaim on the housetops.
- American Standard Version (ASV)
- What I tell you in the darkness, speak ye in the light; and what ye hear in the ear, proclaim upon the house-tops.
- Bible in Basic English (BBE)
- What I say to you in the dark, say in the light: and what comes to your ear secretly, say publicly from the house-tops.
- Darby Translation (DBY)
- What I say to you in darkness speak in the light, and what ye hear in the ear preach upon the houses.
- Webster's Bible (WBS)
- What I tell you in darkness, [that] speak ye in light: and what ye hear in the ear, [that] publish ye upon the house-tops.
- Young's Literal Translation (YLT)
- that which I tell you in the darkness, speak in the light, and that which you hear at the ear, proclaim on the house-tops.
Read in context
- 25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- 26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
- 27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- 28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- 29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
Cross references
- Acts 5:20 ಅಪೊಸ್ತಲರ ಕೃತ್ಯಗಳು 5:20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- John 16:1 ಯೋಹಾನನು 16:1ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
- Proverbs 1:20–23 ಜ್ಞಾನೋಕ್ತಿಗಳು 1:20–23ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Matthew 13:1–17 ಮತ್ತಾಯನು 13:1–17ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು. ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು. ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು. ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- John 16:29 ಯೋಹಾನನು 16:29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
- Matthew 13:34–35 ಮತ್ತಾಯನು 13:34–35ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Proverbs 8:1–5 ಜ್ಞಾನೋಕ್ತಿಗಳು 8:1–5ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ? ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ. ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ-- ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- 2 Corinthians 3:12 2 ಕೊರಿಂಥದವರಿಗೆ 3:12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Acts 17:17 ಅಪೊಸ್ತಲರ ಕೃತ್ಯಗಳು 17:17ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.