Matthew · chapter 10 · verse 28
Matthew 10:28 in Kannada
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
Shareeravannu kolluvavarige hedarabediri; yaakandare avaru aatmavannu kollalu shaktaralla; aadare aatma mattu shareera eradannoo narakadalli naashamaadalu shaktanaagiru vaatanige bhayapadiri.
Matthew 10:28 in English
- King James Version (KJV)
- And fear not them which kill the body, but are not able to kill the soul: but rather fear him which is able to destroy both soul and body in hell.
- World English Bible (WEB)
- Don’t be afraid of those who kill the body, but are not able to kill the soul. Rather, fear him who is able to destroy both soul and body in Gehenna.
- American Standard Version (ASV)
- And be not afraid of them that kill the body, but are not able to kill the soul: but rather fear him who is able to destroy both soul and body in hell.
- Bible in Basic English (BBE)
- And have no fear of those who put to death the body, but are not able to put to death the soul. But have fear of him who has power to give soul and body to destruction in hell.
- Darby Translation (DBY)
- And be not afraid of those who kill the body, but cannot kill the soul; but fear rather him who is able to destroy both soul and body in hell.
- Webster's Bible (WBS)
- And fear not them who kill the body, but are not able to kill the soul: but rather fear him who is able to destroy both soul and body in hell.
- Young's Literal Translation (YLT)
- 'And be not afraid of those killing the body, and are not able to kill the soul, but fear rather Him who is able both soul and body to destroy in gehenna.
Read in context
- 26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
- 27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- 28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- 29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
- 30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
Cross references
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Isaiah 8:12–13 ಯೆಶಾಯ 8:12–13ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ. ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- James 4:12 ಯಾಕೋಬನು 4:12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- Romans 8:35–39 ರೋಮಾಪುರದವರಿಗೆ 8:35–39ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Ecclesiastes 8:12–13 ಪ್ರಸಂಗಿ 8:12–13ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Revelation 20:10–15 ಪ್ರಕಟನೆ 20:10–15ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Ecclesiastes 5:7 ಪ್ರಸಂಗಿ 5:7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.