Matthew · chapter 10 · verse 32
Matthew 10:32 in Kannada
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
Yaavanaadaroo manushyara munde nannannu oppikondare naanu saha paralokadalli nanna tandeya munde avanannu oppikolluvenu;
Matthew 10:32 in English
- King James Version (KJV)
- Whosoever therefore shall confess me before men, him will I confess also before my Father which is in heaven.
- World English Bible (WEB)
- Everyone therefore who confesses me before men, I will also confess him before my Father who is in heaven.
- American Standard Version (ASV)
- Every one therefore who shall confess me before men, him will I also confess before my Father who is in heaven.
- Bible in Basic English (BBE)
- To everyone, then, who gives witness to me before men, I will give witness before my Father in heaven.
- Darby Translation (DBY)
- Every one therefore who shall confess me before men, I also will confess him before my Father who is in [the] heavens.
- Webster's Bible (WBS)
- Whoever therefore shall confess me before men, him will I also confess before my Father who is in heaven.
- Young's Literal Translation (YLT)
- 'Every one, therefore, who shall confess in me before men, I also will confess in him before my Father who is in the heavens;
Read in context
- 30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
- 31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
- 32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- 33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
- 34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
Cross references
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Romans 10:9–10 ರೋಮಾಪುರದವರಿಗೆ 10:9–10ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Luke 12:8–9 ಲೂಕನು 12:8–9ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
- 1 John 4:15 1 ಯೋಹಾನನು 4:15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- 1 Timothy 6:12–13 1 ತಿಮೊಥೆಯನಿಗೆ 6:12–13ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ. ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.