Matthew · chapter 10 · verse 34
Matthew 10:34 in Kannada
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
Naanu bhoomiya mele samaadhaanavannu kaluhisuvadakkaagi bandenendu nenasabediri; khadga vannallade samaadhaanavannu kaluhisuvadakke naanu bandilla;
Matthew 10:34 in English
- King James Version (KJV)
- Think not that I am come to send peace on earth: I came not to send peace, but a sword.
- World English Bible (WEB)
- “Don’t think that I came to send peace on the earth. I didn’t come to send peace, but a sword.
- American Standard Version (ASV)
- Think not that I came to send peace on the earth: I came not to send peace, but a sword.
- Bible in Basic English (BBE)
- Do not have the thought that I have come to send peace on the earth; I came not to send peace but a sword.
- Darby Translation (DBY)
- Do not think that I have come to send peace upon the earth: I have not come to send peace, but a sword.
- Webster's Bible (WBS)
- Think not that I am come to send peace on earth: I came not to send peace, but a sword.
- Young's Literal Translation (YLT)
- 'Ye may not suppose that I came to put peace on the earth; I did not come to put peace, but a sword;
Read in context
- 32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- 33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
- 34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
- 35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
- 36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
Cross references
- Luke 12:49–53 ಲೂಕನು 12:49–53ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು? ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ! ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು. ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- Acts 14:4 ಅಪೊಸ್ತಲರ ಕೃತ್ಯಗಳು 14:4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- Acts 13:45–50 ಅಪೊಸ್ತಲರ ಕೃತ್ಯಗಳು 13:45–50ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು. ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Acts 14:2 ಅಪೊಸ್ತಲರ ಕೃತ್ಯಗಳು 14:2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- John 7:40–52 ಯೋಹಾನನು 7:40–52ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು. ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು; ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು. ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Jeremiah 15:10 ಯೆರೆಮೀಯ 15:10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.